ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿರುವ ನರೇಂದ್ರ ಮೋದಿ ಅವರು ಗುರುವಾರ ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್ ಡಿಎ ಸಂಸದೀಯ ಮಂಡಳಿಯ ನಾಯಕ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

RELATED ARTICLES  ನಾಡಹಬ್ಬ 407ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜು

ಕಳೆದ ಬಾರಿ ಈಶ್ವರನ ಹೆಸರನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು ನರೇಂದ್ರ ಮೋದಿ ಅವರು ಈ ಬಾರಿಯೂ ಈಶ್ವರನ ಹೆಸರಿನಲ್ಲಿ ಹಿಂದಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಧಾನಿ ಮೋದಿ ಜೊತೆ ಕೇಂದ್ರ ಸಚಿವರಾಗಿ ರಾಜನಾಥ್ ಸಿಂಗ್, ಅಮಿತ್ ಶಾ, ಸ್ಮೃತಿ ಇರಾನಿ, ನಿತಿನ್ ಗಡ್ಕರಿ, ಡಿ ವಿ ಸದಾನಂದಗೌಡ, ಪಿಯೂಷ್ ಗೋಯೆಲ್, ರವಿಶಂಕರ್ ಪ್ರಸಾದ್, ರಾಮ್ ವಿಲಾಸ್ ಪಾಸ್ವಾನ್ ಸೇರಿದಂತೆ ಹಲವರು ಪ್ರತಿಜ್ಞಾವಿಧಿ ಸ್ವೀಕರಿಸಿದರು.

RELATED ARTICLES  ನಾಳೆ ಉತ್ತರಕನ್ನಡದಲ್ಲಿ 42,200 ಕ್ಕೂ ಹೆಚ್ಚು ಕೋವಿಡ್ ಲಸಿಕೆ ಲಭ್ಯ

ರಾಷ್ಟ್ರಪತಿ ಭವನದ ಮುಂಭಾಗದ ಆವರಣದಲ್ಲಿ ನಡೆದ ಅದ್ದೂರಿ ಸಮಾರಂಭಕ್ಕೆ ಸುಮಾರು 6,500ಕ್ಕೂ ಅಧಿಕ ಗಣ್ಯರು ಸಾಕ್ಷಿಯಾದರು. ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಹಾಗೂ ಇನ್ನಿತರರು ಇದ್ದರು.