ಕಾರವಾರ: ಮೌಲಾನಾ ಆಜಾದ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ 5 ಕೊನೆಯ ದಿನವಾಗಿರುತ್ತದೆ. ಕನ್ನಡ, ಆಂಗ್ಲ, ಉರ್ದು ಭಾಷೆಗಳಿಗೆ ತಲಾ ಒಂದು ಹಾಗೂ ಗಣಿತ ವಿಷಯಕ್ಕೆ ಒಂದು ಹುದ್ದೆಯನ್ನು ನೇಮಕ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಶಿಕ್ಷಕರಿಗೆ ಗೌರವಧನ ನೀಡಲಾಗುವುದು.
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ತೆಲಿರಾಮಜಿ ರಸ್ತೆ, ಇಂಡಿಯನ್ ಓವರಸಿಸ್ ಬ್ಯಾಂಕ್ ಹತ್ತಿರ, 2ನೇ ಮಹಡಿ, ಕಾರವಾರ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು, ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 08382-220336 ಸಂಪರ್ಕಿಸಬಹುದಾಗಿರುತ್ತದೆ ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.