ಭಟ್ಕಳ: ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ಭಟ್ಕಳ ತಾಲೂಕಿನ ಮುರ್ಡೇಶ್ವರ ರಸ್ತೆಯ ತೆರ್ನಮಕ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ನಡೆದಿದೆ.
ಅಪಘಾತದಲ್ಲಿ ತಾಲೂಕಿನ ಸಣಭಾವಿ ಗ್ರಾಮದ ನಿವಾಸಿಗಳಾದ ಗಣೇಶ್ ನಾಯ್ಕ ಹಾಗೂ ಕೃಷ್ಣಾ ನಾಯ್ಕ ಮೃತಬೈಕ್ ಸವಾರರು ಎನ್ನಲಾಗಿದೆ. ಅಪಘಾತ ಸಂಭವಿಸಿದ ನಂತರ ಟೆಂಪೋ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮುರಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯಲಿದೆ.