ಕಾರವಾರ: ತಾಲೂಕಿನಲ್ಲಿ ಮೀನು ಮಾರುಕಟ್ಟೆ ಕಟ್ಟಡ ನಿರ್ಮಾಣ ಕಾಮಗಾರಿ ನಿಧಾನವಾಗಿ ಸಾಗಿದ್ದು ಶೀಘ್ರವೇ ಮೀನು ಮಾರುಕಟ್ಟೆಯನ್ನು ಸ್ಥಳಾಂತರಿಸುವಂತೆ ಮೀನುಗಾರರು ನಗರದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ನಗರದ ಸಂಡೆ ಮಾರುಕಟ್ಟೆಯಲ್ಲಿ ಕುಳಿತು ಮೀನು ಮಾರಾಟ ಮಾಡುವ ಮೂಲಕ ಮೀನುಗಾರರು ತಮ್ಮ ಆಕ್ರೋಶ ಹೊರಹಾಕಿದರು.

ಕಾರವಾರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ತಾತ್ಕಾಲಿಕ ಮೀನು ಮಾರುಕಟ್ಟೆಯಲ್ಲೇ ಮಹಿಳೆಯರು ಮೀನು ಮಾರಾಟ ಮಾಡುತ್ತಿದ್ದಾರೆ. ಆದರೆ ಅಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಅಲ್ಲದೆ ಸದ್ಯದಲ್ಲಿಯೇ ಮಳೆಗಾಲ ಪ್ರಾರಂಭಗೊಳ್ಳುವುದರಿಂದ ತಾತ್ಕಾಲಿಕ ಮೀನು ಮಾರುಕಟ್ಟೆಯಲ್ಲಿ ಕುಳಿತು ಮೀನು ವ್ಯಾಪಾರ ಮಾಡಲು ಸಾಧ್ಯವಾಗುವುದಿಲ್ಲ. ಮೊದಲಿದ್ದ ಮೀನು ಮಾರುಕಟ್ಟೆಯ ಸ್ಥಳದಲ್ಲಿ ಹೊಸ ಮೀನು ಮಾರುಕಟ್ಟೆ ಕಟ್ಟಡ ನಿರ್ಮಾಣಗೊಳ್ಳಲು ಆರಂಭಗೊಂಡು ಒಂದು ವರ್ಷ ಕಳೆಯುತ್ತಿದೆ. ಆದರೆ ಕಟ್ಟಡ ನಿರ್ಮಾಣ ಮಾತ್ರ ಮಂದಗತಿಯಲ್ಲಿ ಸಾಗಿದೆ ಎಂದು ಮೀನುಗಾರ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES  ಬೈಕ್ ಅಪಘಾತ ಗಂಭೀರ ಸ್ಥಿತಿಯಲ್ಲಿ ಕಾರವಾರದ ಯುವಕ!

ಶಾಸಕರ ಉಪಸ್ಥಿತಿಯಲ್ಲಿ ಪರಿಸ್ಥಿತಿ ತಿಳಿಗೊಳಿಸಲಾಯಿತು.