ಕಾರವಾರ: ಮರಳುಗಾರಿಕೆ ಹಾಗೂ ಮರಳು ದಿಬ್ಬಗಳಿಂದ ಮರಳು ತೆಗೆಯುವಿಕೆ ಮತ್ತು ಸಾಗಾಣಿಕೆ ಬಗ್ಗೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಮಹತ್ವದ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿನ ಕರಾವಳಿ ನಿಯಂತ್ರಣ ವಲಯದ ನದಿಪಾತ್ರಗಳಲ್ಲಿನ ಮರಳು ದಿಬ್ಬಗಳಿಂದ ಮರಳು ತೆಗೆಯುವಿಕೆ ಮತ್ತು ಸಾಗಾಣಿಕೆಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ ಅವರು ಆದೇಶ ಹೊರಡಿಸಿದ್ದಾರೆ.
ಮಳೆಗಾಲ ಸಮಯದಲ್ಲಿ ಮೀನು ಮತ್ತು ಇತರ ಜಲಚರಗಳು ಮೊಟ್ಟೆ ಇಡುವ ಹಾಗೂ ಸಂತಾನೋತ್ಪತ್ತಿ ಮಾಡುವ ಸಮಯವಾಗಿರುವುದರಿಂದ ಮರಳು ತೆಗೆದು ಸಾಗಾಣಿಕೆ ಮಾಡುವುದನ್ನು ದಿನಾಂಕ:06-06-2019 ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೂ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.