ಅಂಕೋಲಾ : ಅಂಕೋಲಾ ತಾಲೂಕಿನ ಹಾರವಾಡಾದ ಸೀಬರ್ಡ್ ಕಾಲೋನಿಯಲ್ಲಿ 2017ರ ಜೂ. 25 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಮಾನ ನೀಡಿದೆ.
ದುಡಿದ ಹಣದಲ್ಲಿ ಪಾಲು ಕೊಡುತ್ತಿಲ್ಲ ಎಂಬ ಸಿಟ್ಟಿಗೆ ಮಗನನ್ನೇ ಕೊಲೆ ಮಾಡಿದ್ದ ಪ್ರಕರಣ ಇದಾಗಿದ್ದು ಇದೀಗ ತಂದೆಗೆ ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ .
ಪಾಂಡುರಂಗ ನಾರಾಯಣ ಹರಿಕಂತ್ರ ಎನ್ನುವ ವ್ಯಕ್ತಿ ರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ತನ್ನ ಮಗ ವಿನೋದ ಎಂಬಾತನ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿದ್ದ . ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಾಂಡುರಂಗನನ್ನು ಬಂಧಿಸಲಾಗಿತ್ತು ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ನಾರಾಯಣರವರು ಆಪಾದಿತ ಪಾಂಡುರಂಗನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ .