ಗೋರ್ಕಣ: ಲಾರಿ ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ತಾಲೂಕಿನ ಮೊರ್ಬಾ ಬಸ್ ನಿಲ್ದಾಣದ ಬಳಿ ನಡೆದಿದೆ.

ಗೋರ್ಕಣಕ್ಕೆ ಪ್ರವಾಸಕ್ಕೆ ಬರುತ್ತಿದ್ದ ಉಡುಪಿಯ ವಿದ್ಯಾರ್ಥಿಗಳು ಇವರಾಗಿದ್ದಾರೆಂದು ತಿಳಿದುಬಂದಿದೆ. ಇಬ್ಬರು ವಿದ್ಯಾರ್ಥಿಗಳು ಮುಂದೆ ಸಾಗುತ್ತಿದ್ದ ವೇಳೆಯಲ್ಲಿ ಮೊರ್ಬಾ ಬಸ್ಸ ನಿಲ್ದಾಣದ ಬಳಿ ಅತೀ ವೇಗವಾಗಿ ಬಂದ ಮುಂಬಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಮಹಾರಾಷ್ಟ್ರದ ನೊಂದಣಿ ಹೊಂದಿರುವ ಲಾರಿ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರರು ಲಾರಿಯ ಮುಂದಿನ ಚಕ್ರದ ಬಳಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES  ರಾಮದೇವರ ನೂತನ ಮೂರ್ತಿ ಪ್ರತಿಷ್ಠೆ

ಸಾವನ್ನಪ್ಪಿದ ವಿದ್ಯಾರ್ಥಿಗಳು ಉಡುಪಿ ಜಿಲ್ಲೆಯ ಸಾಯಿನ್ ಹಾಗು ಆರ್ತಿಕ್ ಎಂದು ಗುರುತಿಸಲಾಗಿದೆ.ಈ ಬಗ್ಗೆ ಗೋರ್ಕಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಇಂದಿನ(ದಿ-05/04/2019) ಉತ್ತರಕನ್ನಡ ಜಿಲ್ಲೆಯ ಪ್ರಮುಖ ತಾಲೂಕುಗಳ ಅಡಿಕೆ ಧಾರಣೆ