ಶಿರಸಿ: ಇಂದು ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಗಮನ ಸೆಳೆದರು.
ಕೆನರಾ ಲೋಕಸಭಾ ಕ್ಷೇತ್ರದಿಂದ 6 ನೇ ಬಾರಿಗೆ ಭರ್ಜರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ ಹೆಗಡೆ ವಿಶೇಷವಾಗಿ ಪ್ರಮಾಣವಚನ ಸ್ವೀಕರಿಸಿದರು. ಇನ್ನುಳಿದಂತೆ ಕರ್ನಾಟಕದಿಂದ ಸಂಸದರಾಗಿರುವ ಡಿ ವಿ ಸದಾನಂದಗೌಡ, ತೇಜಸ್ವಿ ಸೂರ್ಯ, ಸುಮಲತಾ ಅಂಬರೀಶ್ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.