ಕುಮಟಾ: ತಾಲೂಕಾ ಮಟ್ಟದ ಅಂತಾರಾಷ್ಟ್ರೀಯ ಯೋಗ ದಿನ ಹೊಲನಗದ್ದೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ ಇಂದು ನಡೆಯಲಿದೆ. ಶಾಸಕ ದಿನಕರ ಕೆ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ತಾಲೂಕಿನ ಜನಪ್ರತಿನಿಧಿಗಳು, ಅಧಿಕಾರಿಗಳು, ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

RELATED ARTICLES  ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿಯ ರಾಜ್ಯ ಮಟ್ಟದ ಸಾಧನೆ

ಡಾ.ನಾಗರಾಜ ಭಟ್ಟ ರವರಿಂದ “ನಮ್ಮ ಆಹಾರ ಪದ್ದತಿ” ಹಾಗೂ ನಾರಾಯಣ ಸ್ವಾಮಿಯವರಿಂದ “ಅಷ್ಟಾಂಗ ಯೋಗ”ದ ಕುರಿತು ಉಪನ್ಯಾಸ ನಡೆಯಲಿದೆ. ವಿದ್ಯಾರ್ಥಿಗಳಿಂದ ವಿಶೇಷ ಯೋಗ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಯೋಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಜ್ಯ ಉಪಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ ಆಯ್ಕೆ