ಭಟ್ಕಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಟ್ಕಳ, ಇವರ ವತಿಯಿಂದ, ಮಲೇರಿಯಾ ವಿರೋಧಿ ಮಾಸಾಚರಣೆ ಜೂನ್ 2019 ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಮಾತನಾಡಿ ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದ ಜೊತೆ ಜೊತೆಗೆ ಹತ್ತು ಹಲವು ರೋಗಗಳೂ ಮನುಷ್ಯನನ್ನು ಕಾಡಲು ಪ್ರಾರಂಭವಾಗುತ್ತದೆ. ಕಾರಣ ಜನರು ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಮಾಲಿನ್ಯ ಮಾಡದೆ ಶುಚಿಯಾಗಿರುವಂತೆ ನೋಡಿಕೊಳ್ಳುವುದರ ಮೂಲಕ ರೋಗಗಳಿಂದ ರಕ್ಷಣೆಯನ್ನು ಪಡೆಯಬೇಕು ಎಂದರು.

RELATED ARTICLES  ಭಟ್ಕಳದಲ್ಲಿ ಪೌರತ್ವ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ

ಮಳೆಗಾಲದಲ್ಲಿ ಸಾಮಾನ್ಯವಾಗಿ ಕಂಡುಬರುವಂತಹ ರೋಗಗಳ ಬಗ್ಗೆ ಅರಿವು ಮೂಡಿಸುವ ಮತ್ತು ಮಾಹಿತಿಯನ್ನು ನೀಡುವ ಇಂತಹ ಕಾರ್ಯಕ್ರಮಗಳು ಎಲ್ಲಾ ಶಾಲಾ ಕಾಲೇಜುಗಳಲ್ಲಿ ನಡೆದರೆ ಜನರಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟರು.

RELATED ARTICLES  ಮಕ್ಕಳಿಗೂ ಹೆಲ್ಮೇಟ್ ಕಡ್ಡಾಯ : ಕೇಂದ್ರದ ಮಹತ್ವದ ಆದೇಶ.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು.