ಕುಮಟಾ: ತಾಲೂಕಿನ ಹೊಲನಗದ್ದೆ ಶಾಲೆಯ ಯೋಗ ಸಭಾಭವನದಲ್ಲಿ ಕುಮಟಾ ತಾಲೂಕಾ ಮಟ್ಟದ ಯೋಗ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಉತ್ತರ ಕನ್ನಡ ಜಿಲ್ಲಾ ಪಂಚಾಯತ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶ್ರೀ ರತ್ನಾಕರ ನಾಯ್ಕರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ” ಇಂದಿನ ಆಧುನಿಕ ಯುಗದಲ್ಲಿ ಯೋಗ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿದೆ. ನಮ್ಮ ನಿತ್ಯ ಜೀವನ ಪದ್ಧತಿಯಲ್ಲಿ ಯೋಗವನ್ನು ಅಳವಡಿಸಿ ಕೊಂಡರೆ ಎಷ್ಟೋ ಸಮಸ್ಯೆಗಳಿಗೆ ಪರಿಹಾರ ಕಾಣಲು ಸಾಧ್ಯ” ಎಂದರು.
ಡಾ. ನಾಗರಾಜ ಭಟ್ಟ ” ಯೋಗ ಮತ್ತು ನಮ್ಮ ಆಹಾರ ಪದ್ಧತಿ” ವಿಷಯದ ಕುರಿತು ಉಪನ್ಯಾಸ ನೀಡಿದರು. ಕುಮಟಾ ತಾಲೂಕು ಪಂಚಾಯತ ಅಧ್ಯಕ್ಷೆ ಶ್ರೀಮತಿ ವಿಜಯಾ ಪಟಗಾರ ಅಧ್ಯಕ್ಷತೆ ವಹಿಸಿದ್ದರು.
ಸ್ಥಾಯೀ ಸಮಿತಿಯ ಅಧ್ಯಕ್ಷ ಜಗನ್ನಾಥ ನಾಯ್ಕ , ಉಪಾಧ್ಯಕ್ಷೆ ಗೀತಾ ಮುಕ್ರಿ, ಹೊಲನಗದ್ದೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘವೇಂದ್ರ ಪಟಗಾರ, ಸದಸ್ಯರಾದ ರಮ್ಯಾ ಶೇಟ್, ರಾಮಾ ಮಡಿವಾಳ, ಎಸ್.ಡಿ.ಎಮ್.ಸಿ. ಅಧ್ಯಕ್ಷೆ ದೀಪಾ ಹಿಣಿ , ತೋಟಗಾರಿಕಾ ಇಲಾಖೆಯ ಎಚ್.ಎಲ್.ಪಟಗಾರ. ಆರೋಗ್ಯ ಇಲಾಖೆಯ ಆರ್.ಜಿ.ನಾಯ್ಕ. ದೈಹಿಕ ಶಿಕ್ಷಣ ಪರಿವೀಕ್ಷಕ ವಿಠೋಬ ನಾಯಕ, ಶಿಕ್ಷಣ ಸಂಯೋಜಕ ಪಿ.ಎಮ್.ಮುಕ್ರಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ನಾರಾಯಣ ಸ್ವಾಮಿಯವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡಿದರು.
ಕುಮಟಾ ತಾಲೂಕ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಿ.ಟಿ.ನಾಯ್ಕ ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು. ರವೀಂದ್ರ ಭಟ್ಟ ಸೂರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.