ಕಾರವಾರ: ಹಿರೇಗುತ್ತಿಯ ಸೆಕೆಂಡರಿ ಪ್ರೌಢಶಾಲೆಯಲ್ಲಿ ಆ. 10ರಂದು 10.30ಗಂಟೆಗೆ ಅಂತರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಹೊನ್ನಾವರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ವಸಂತ ರೆಡ್ಡಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ನಾಯಕ, ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಮೋಹನ ಕೆರೆಮನೆ, ಸದಸ್ಯೆ ಶಾಂತಾ ನಾಯಕ, ಪ್ರೌಢಶಾಲೆಯ ಮುಖ್ಯಾಧ್ಯಾಪಕ ರೋಹಿದಾಸ ನಾಯಕ ಉಪಸ್ಥಿತರಿರುವರು. ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊನ್ನಪ್ಪ ಗೌಡ ಅಧ್ಯಕ್ಷತೆ ವಹಿಸವರು ಎಂದು ಜೈವಿಕ ಇಂಧನ ಸಂಶೋಧನೆ, ಮಾಹಿತಿ ಮತ್ತು ಪ್ರಾತ್ಯಕ್ಷಿಕಾ ಕೇಂದ್ರದ ಸಂಯೋಜಕ ಡಾ. ವಿ.ಎನ್.ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.