ಕುಮಟಾ : ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ವ್ಯವಸ್ಥೆ ಮಾಡುವಂತೆ
ಕರ್ನಾಟಕ ರಕ್ಷಣಾ ವೇದಿಕೆ ಕುಮಟಾ ಘಟಕದ ವತಿಯಿಂದ ಕುಮಟಾದ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಶ್ರೀನಿವಾಸ ನಾಯಕ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ವೈದ್ಯರು ಕೊರತೆಯಿದ್ದು ಸರಿಯಾದ ಮೂಲಸೌಕರ್ಯ ಇಲ್ಲದೆ ಇರುವುದರಿಂದ ಹಾಗೂ ಶವಗಾರವು ತೀರಾ ಹದಗೆಟ್ಟಿರುವುದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ.
ಸಾವು ನೋವು ಉಂಟಾದಾಗ ಉತ್ತಮ ಪ್ರಥಮ ಚಿಕಿತ್ಸೆಯನ್ನು ನೀಡಲು ಇಲ್ಲಿ ಯಾವುದೇ ಸೌಕರ್ಯ ಇಲ್ಲವಾಗಿದ್ದು ಹಾಗೂ ವೈದ್ಯರು ಕೊರತೆಯಿಂದ ಸಣ್ಣಪುಟ್ಟ ಅನಾರೋಗ್ಯದ ಸಾಮಾನ್ಯನೂ ಕೂಡಾ ಖಾಸಗಿ ಆಸ್ಪತ್ರೆಯನ್ನು ಅವಲಂಬಿಸಬೇಕಾಗಿದೆ ಎಂಬುದನ್ನು ಮನಗಂಡ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಸಲ್ಲಿಸಿತು.
ಇವೆಲ್ಲವನ್ನೂ ಪರಿಗಣನೆಗೆ ತೆಗೆದುಕೊಂಡು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ತಾಲೂಕಿನ ಆಸ್ಪತ್ರೆಯನ್ನು ಮೇಲ್ದರ್ಜೆಗೊಳಿಸಲು ಆದೇಶಿಸಬೇಕಾಗಿ ವಿನಂತಿಸಲಾಯಿತು.
ಈ ವ್ಯವಸ್ಥೆ ಸರಿಪಡಿಸದಿದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಅಧ್ಯಕ್ಷರಾದ ಭಾಸ್ಕರ ಪಟಗಾರ ಎಚ್ಚರಿಕೆ ನೀಡಿದ್ದಾರೆ.