ಕುಮಟಾ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕುಮಟಾ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಕುಮಟಾ ಇವರ ಆಶ್ರಯದಲ್ಲಿ ಪಟ್ಟಣದ ನೆಲ್ಲಿಕೇರಿ ಹನುಂತಬೆಣ್ಣೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮವನ್ನು ಗಿಡವೊಂದಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಲಾಯಿತು.

ಕುಮಟಾ ಅರಣ್ಯ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣಕುಮಾರ ಬಸರೂರ್ ಮಾತನಾಡಿ ನಮ್ಮ ಪೂರ್ವಜನರು ಮರಗಿಡಗಳಲ್ಲಿ ದೈವೀ ಸ್ವರೂಪವನ್ನು ಕಂಡು ಅದರ ಪಾಲನೆ, ಪೋಷಣೆ ಮಾಡುತ್ತಿದ್ದರಿಂದ ಇಂದು ನಾವು ಉಸಿರಾಡುತ್ತಿದ್ದೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯ ನಾಶದಿಂದ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಮುಂದಿನ ಪೀಳಿಗೆ ನೆಮ್ಮದಿಯಿಂದ ಜೀವಿಸಲು ನಾವೆಲ್ಲರೂ ಗಿಡಮರಗಳ ಪಾಲನೆ ಕಡೆ ಹೆಚ್ಚಿನ ಗಮನಹರಿಸಬೇಕಾಗಿದೆ ಎಂದು ತಿಳಿಸಿದರು.

RELATED ARTICLES  ಹಾಲು ತುಂಬಿ ಸಾಗುತ್ತಿದ್ದ ಟ್ಯಾಂಕರ್ ಲಾರಿ ಪಲ್ಟಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಸುಬ್ರಾಯ ಭಟ್ಟ ಪ್ರಾಸ್ತಾವಿಕ ಮಾತನಾಡಿ ಪತ್ರಿಕಾ ದಿನಾಚರಣೆಯ ಉದ್ದೇಶ ವಿವರಿಸಿದರು.


    ಕಾಲೇಜಿನ ಪ್ರಚಾರ್ಯ ಸತೀಶ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ಪತ್ರಕರ್ತರ ಸಂಘ ಪತ್ರಿಕಾ ದಿನಾಚರಣೆಗಾಗಿ ನಮ್ಮ ಕಾಲೇಜನ್ನು ಆಯ್ಕೆ ಮಾಡಿಕೊಂಡಿರುವುದು ಸಂತಸವಾಗಿದೆ. ವಿದ್ಯಾರ್ಥಿಗಳು ಪತ್ರಿಕೆಗಳನ್ನು ಹೆಚ್ಚು ಹೆಚ್ಚು ಓದಬೇಕು. ಅದರಿಂದ ಜ್ಞಾನ ಸಂಪಾದನೆಯಾಗಿ ಮುಂದೊಂದು ದಿನ ಅದು ತಮಗೆ ಸಹಕಾರಿಯಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಸಿದರು.

    ಪತ್ರಿಕಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಜಲ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ 18 ಜನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅವರಲ್ಲಿ ಪ್ರಥಮ ಸ್ಥಾನವನ್ನು ವಿಶ್ವಾಸ ಡಿ. ಶೆಟ್ಟಿ ದ್ವಿತೀಯ ಪವಿತ್ರಾ ವಿ. ಹೆಗಡೆ, ತೃತೀಯ ಸ್ಥಾನವನ್ನು ಸಿಂಧು ಗುನಗಾ ಪಡೆದುಕೊಂಡಿದ್ದರು. ವಿಜೇತರಿಗೆ ನಗದು ಬಹುಮಾನಗಳ ಜೊತೆ ಪಾರಿತೋಷಕ ಹಾಗೂ ನೆನಪಿನ ಕಾಣಿಕೆಯನ್ನು ಉದ್ಘಾಟಕರು ಹಾಗೂ ಅತಿಥಿಗಳು ವಿತರಿಸಿದರು. ಅತಿಥಿಯಾಗಿ ಬಿಜೆಪಿ ಮುಖಂಡ ವಿನೋದ ಪ್ರಭು ವೇದಿಕೆಯಲ್ಲಿ ಉಪಸ್ಥಿತರಿದ್ದರು.

RELATED ARTICLES  ಹಿರಿಯ ಪತ್ರಕರ್ತ, ಅಂಕಣಕಾರ ಅನಂತ ವೈದ್ಯ ಇನ್ನಿಲ್ಲ : ಕನ್ನಡ ಮತ್ತು ಸಂಸ್ಕೃತದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಹಿರಿಯರು.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಕುಮಟಾ ತಾಲೂಕಾಧ್ಯಕ್ಷ ಅನ್ಸಾರ್ ಶೇಖ್ ಸ್ವಾಗತಿಸಿದರು. ಪತ್ರಕರ್ತ ಎಂ.ಜಿ.ನಾಯ್ಕ ನಿರೂಪಿಸಿದರು. ಕಾರ್ಯದರ್ಶಿ ಗೋವಿಂದ ಶಾನಭಾಗ ವಂದಿಸಿದರು.