ಕಾರವಾರ: ಜಿಲ್ಲಾ ಕೈಗಾರಿಕಾ ಕೇಂದ್ರವು 2019-20ನೇ ಸಾಲಿನ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಮತ್ತು ಸೇವಾ ಘಟಕವನ್ನು ಸ್ಥಾಪಿಸಲು ಮತ್ತು ಸಾಲ ಪಡೆಯಲಿಚ್ಛಿಸುವ ಗ್ರಾಮೀಣ ಭಾಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು. 31 ಕೊನೆಯ ದಿನ. ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷ ಹಾಗೂ ಪ.ಜಾತಿ/ಪ.ಪಂ. ಮಹಿಳೆ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಮಾಜಿ ಸೈನಿಕರು, ಅಂಗವಿಕಲರು ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು. ಘಟಕದ ಗರಿಷ್ಠ ಯೋಜನಾ ವೆಚ್ಚ 10 ಲಕ್ಷ ರೂ. ಆಗಿದ್ದು 5 ಲಕ್ಷ ರೂ. ಮತ್ತು ಅದಕ್ಕಿಂತ ಮೇಲ್ಪಟ್ಟ ಯೋಜನೆಗಳನ್ನು ಸ್ಥಾಪಿಸಲು ಅಭ್ಯರ್ಥಿಗಳು 8 ನೇ ತರಗತಿ ಪಾಸಾಗಿರಬೇಕು.

RELATED ARTICLES  ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ ಮಳೆ

ಆನ್‍ಲೈನ್ ವೆಬ್‍ಸೈಟ್ www.cmegp.kar.nic.in ರಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08382-282302, ಉಪ ನಿರ್ದೇಶಕರು ಧನಂಜಯ ಹೆಗಡೆ (9481372678), ಸಹಾಯಕ ನಿರ್ದೇಶಕರು, ಶಿರಸಿ/ಕುಮಟಾ ಎಸ್. ವೆಂಕಟೇಶ (9449937397), ಕೈಗಾರಿಕಾ ವಿಸ್ತರಣಾಧಿಕಾರಿ ಕಾರವಾರ, ಹನುಮೇಶ ಮೇಗೂರ, (7795045313), ಕೈಗಾರಿಕಾ ವಿಸ್ತರಣಾಧಿಕಾರಿ, ಹಳಿಯಾಳ ರಮೇಶ ಜಾದವ, (9483767219), ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕಾರವಾರ(08382-226506), ಕರ್ನಾಟಕ ಖಾದಿ ಗ್ರಾಮೋದ್ಯೋಗ ಆಯೋಗ, ಬೆಂಗಳೂರು (ಪ್ರಾದೇಶಿಕ ಕಚೇರಿ-ಹುಬ್ಬಳ್ಳಿ) (0836-2282882) ರವರನ್ನು ಸಂಪರ್ಕಿಸಲು ಕೋರಿದೆ.

RELATED ARTICLES  ಶಿಕ್ಷಕರ ಅರ್ಹತಾ ಪರೀಕ್ಷೆಗೆ ಸಕಲ‌ ಸಿದ್ಧತೆ : ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ