ಮಂಗಳೂರು: ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ(67) ಗುರುವಾರ ರಾತ್ರಿ ಕೆಎಸ್‌ಆರ್ ಟಿಸಿ ಬಸ್ ನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಬಸ್ ನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಕಾರ್ಕಳ ಮಾಜಿ ಶಾಸಕ ಗೋಪಾಲ್ ಭಂಡಾರಿ ನಿಧನರಾಗಿದ್ದಾರೆ. ಕುಟುಂಬದ ಮೂಲಗಳು ತಿಳಿಸಿರುವಂತೆ ಇಂದು ಮಧ್ಯಾಹ್ನ ಅವರು ಬೆಂಗಳೂರಿನಿಂದ ಹೊರಟಿದ್ದರು ಎನ್ನಲಾಗಿದೆ.

RELATED ARTICLES  ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಪರೀಕ್ಷೆ ಇಲ್ಲದೆಯೇ ಪಾಸ್..!

ಬಸ್ ನಿಲ್ದಾಣ ತಲುಪಿದ ನಂತರವೂ ಗೋಪಾಲ್ ಭಂಡಾರಿ ಇಳಿಯದ್ದನ್ನು ಕಂಡ ನಿರ್ವಾಹಕರು ಪರೀಕ್ಷಿಸಿದ್ದು, ಈ ವೇಳೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ನಂತರ ಮೃತದೇಹವನ್ನು ಬಸ್ಸಿನಲ್ಲೇ ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ .

RELATED ARTICLES  ಭಾರತಕ್ಕೆ ಐತಿಹಾಸಿಕ ಜಯ:ವಿಂಗ್​ ಕಮಾಂಡರ್​ ಅಭಿನಂದನ್​ ನಾಳೆ ಬಿಡುಗಡೆ; ಪಾಕ್​ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್​ ಖಾನ್​ ಹೇಳಿಕೆ.

ಕೂಡಲೇ ಬಸ್ ನಿರ್ವಾಹಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.