ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಗುರುವಾರ ರಾತ್ರಿ ಸಾಗರದ ಮನೆಯಲ್ಲಿ ಕಾಗೋಡು ತಿಮ್ಮಪ್ಪ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಅಧಿಕ ರಕ್ತದೊತ್ತಡ ಹಾಗೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES  ಅನುಪಮಾ ಶೆಣೈ ಕಾಂಗ್ರೆಸ್‌ನಿಂದ ಕಣಕ್ಕೆ.!

 ಹೀಗಾಗಿ ಅವರನ್ನು ಐಸಿಯುನಿಂದ ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಅವರು ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

RELATED ARTICLES  ಭ್ರಷ್ಟಾಚಾರ : ಪಾಕ್ ಮಾಜಿ ಪ್ರಧಾನಿ ಷರೀಫ್ ಗೆ 7ವರ್ಷ ಜೈಲುಶಿಕ್ಷೆ.