ಕುಮಟಾ: ಕೃಷಿ ಇಲಾಖೆ ಕುಮಟಾ 2019-20 ನೇ ಸಾಲಿನ ಆತ್ಮ ಯೋಜನೆಯಡಿ ನೀಡುವ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಪ್ರಶಸ್ತಿಗೆ ತಾಲೂಕಿನ ಒಟ್ಟು ಐದು ಜನ ರೈತರನ್ನು ಆಯ್ಕೆ ಮಾಡಲಾಗುವುದು ಹಾಗೂ ಆಯ್ಕೆಯಾದ ಐವರಿಗೆ ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಶಂಕರ ಹೆಗಡೆ ತಿಳಿಸಿದ್ದಾರೆ.
ಅರ್ಜಿಸಲ್ಲಿಸುವ ರೈತರು ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ ಸೇರಿದಂತೆ ಇತರೆ ಕೃಷಿ ಚಟುವಟಿಕೆಯಲ್ಲಿ ಸಂಶೋಧನೆ ಹಾಗೂ ಉತ್ತಮ ಸಾಧನೆ ಮಾಡಿರಬೇಕು. ಆಸಕ್ತ ರೈತರು ಈ ಮೇಲೆ ತಿಳಿಸಿದ ಯಾವುದಾದರು ಒಂದು ವಿಭಾಗಕ್ಕೆ ಖುದ್ದಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಅಗತ್ಯ ಮಾಹಿತಿ ಮತ್ತು ಛಾಯಾಚಿತ್ರದೊಂದಿಗೆ ಜು. 30 ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬೇಕೆಂದು ಅವರು ತಿಳಿಸಿದ್ದಾರೆ.