ಕುಮಟಾ: ವಿಶ್ವ ಜಂತುಹುಳು ನಿವಾರಣಾ ದಿನದ ನಿಮಿತ್ತ ಕುಮಟಾ ತಾಲೂಕಾ ಮಟ್ಟದ ಕಾರ್ಯಕ್ರಮ ಇಂದು ಹೊಲನಗದ್ದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸರ್ವೇಲೆನ್ಸ್ ಯುನಿಟ್ ಕಾರವಾರದ ಡಾ// ವಿನೋದ ಭೂತೆ “ಆರೋಗ್ಯವಂತ ಸಮಾಜ ನಿರ್ಮಾಣದ ಉದ್ದೇಶದಿಂದ ರೂಪಿಸಿದ ಕಾರ್ಯಕ್ರಮ “ವಿಶ್ವ ಜಂತುಹುಳು ನಿವಾರಣಾ ದಿನ.” ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳಿಗೆ ಕಾರಣವಾಗುವ ಜಂತುಹುಳು ನಿವಾರಣೆ ಅವಶ್ಯವಿದ್ದು, ರಕ್ತಹೀನತೆ ಮತ್ತು ಅಪೌಷ್ಟಿಕತೆ ತೊಂದರೆ ನಿವಾರಿಸಿ ಶಿಕ್ಷಣ ಮತ್ತು ಜೀವನದಲ್ಲಿ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದ ಈ ಕಾರ್ಯಕ್ರಮದ ಸದುಪಯೋಗವನ್ನು ಎಲ್ಲ ಮಕ್ಕಳೂ ಪಡೆದುಕೊಳ್ಳಬೇಕು ಎಂದು ನುಡಿದರು. ಹೊಲನಗದ್ದೆ ಗ್ರಾಮಪಂಚಾಯತ ಅಧ್ಯಕ್ಷ ರಾದ ರಾಘವೇಂದ್ರ ಪಟಗಾರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತೇಶ ನಾಯಕ ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಪರಸ್ಪರ ಸಹಕಾರದಿಂದ ಕಾರ್ಯ ನಿರ್ವಹಿಸುವ ಮೂಲಕ ಯೋಜನೆಗಳ ಯಶಸ್ಸಿಗೆ ಶ್ರಮಿಸೋಣ ಎಂದರು. ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶ್ರೀನಿವಾಸ ನಾಯಕ , ಕಾಗಾಲ ವೈದ್ಯಾಧಿಕಾರಿ ಡಾ// ಸುಪ್ರಿಯಾ ಭಟ್ಟ . ಗ್ರಾಮಪಂಚಾಯತ ಸದಸ್ಯರಾದ ನಾಗೇಶ ನಾಯ್ಕ, ಶಾರದಾ ಪಟಗಾರ, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವರಾಮ ಭಟ್ಟ, ಶಿಕ್ಷಣ ಸಂಯೋಜಕರಾದ ರಾಯ್ಕರ, ಸಿ.ಆರ್.ಪಿ. ಪ್ರದೀಪ ನಾಯಕ, ಎಸ್.ಡಿ.ಎಮ್.ಸಿ.ಅಧ್ಯಕ್ಷೆ ದೀಪಾ ಹಿಣಿ. ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಆರ್ .ಜಿ.ನಾಯ್ಕ ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು. ರವೀಂದ್ರ ಭಟ್ಟ ಸೂರಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯಾಧ್ಯಾಪಕ ಗಣಪತಿ.ಡಿ. ನಾಯ್ಕ ವಂದಿಸಿದರು. ಶಿಕ್ಷಕರು, ಆರೋಗ್ಯ ಇಲಾಖಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.