ಮಂಗಳೂರು : ಮುಂಗಾರು ನಿನ್ನೆ ಸಂಜೆಯಿಂದ ಚುರುಕುಗೊಂಡಿದ್ದು, ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ನಾನಾ ಕಡೆಗಳಲ್ಲಿ ನಿನ್ನೆ ಸಂಜೆಯಿಂದ ಉತ್ತಮ ಮಳೆಯಾಗುತ್ತಿದೆ ಎಂದು ತಿಳಿದುಬಂದಿದೆ.
ಕರಾವಳಿಯಲ್ಲಿ ಇಂದು ಮುಂಜಾನೆಯಿಂದ ಮಳೆ ಸುರಿಯುತ್ತಿದ್ದು, ಆಗಾಗ್ಗೆ ಗಾಳಿ ಜೊತೆ ಮಳೆ ಸುರಿಯುತ್ತಿದೆ. ಅರಬ್ಬಿ ಸಮುದ್ರದಲ್ಲಿ ಒತ್ತಡ ಉಂಟಾದ ಪರಿಣಾಮ, ಕರಾವಳಿ ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಎಂದು ವರದಿಯಾಗಿದೆ.