ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಜುಲೈ 23ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಕೇರಳದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ ಎನ್ನಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಶನಿವಾರ ಜಿಲ್ಲೆಯ ಎಲ್ಲ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜು. 20 ರಿಂದ 22 ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಸಲಾಗಿದೆ ಎಂದು ತಿಳಿದುಬಂದಿದೆ.
ಉಡುಪಿ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ. ಮಳೆ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವೃತ್ತಿಪರ ಕಾಲೇಜು ಸಹಿತ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಜು. 20 ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮುಂಗಾರು ಚುರುಕುಗೊಂಡಿದೆ. ಬೆಳಗಾವಿ, ವಿಜಯಪುರ, ಗದಗ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಜು. 21 ರ ವರೆಗೆ ಭಾರಿ ಮಳೆ ನಿರೀಕ್ಷಿಸಲಾಗಿದೆ ಎಂದು ವರದಿಯಾಗಿದೆ
.