ಭಟ್ಕಳ : ಪ್ರಕೃತಿ ವಿಕೋಪ ಸಂಬಂಧಿಸಿದ ದೂರು ದಾಖಲಿಸಲು ಭಟ್ಕಳ ತಹಸೀಲ್ದಾರ್ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ ಎಂದು ತಹಸಿಲ್ದಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಭಟ್ಕಳ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಮಳೆಯಿಂದಾದ ಅನಾಹುತಗಳ ಬಗ್ಗೆ ತಾಲೂಕು ಆಡಳಿತದಿಂದ ತಕ್ಷಣ ಕ್ರಮ ಕೈಗೊಳ್ಳಲು ಅನುಕೂಲವಾಗುವಂತೆ ಈ ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಸಹಾಯವಾಣಿ ಸ್ಥಿರ ದೂರವಾಣಿ ಸಂಖ್ಯೆ 08385-226422 ಇಲ್ಲಿಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ ಎಂದು ಭಟ್ಕಳ ತಹಸೀಲ್ದಾರ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.