ಕಾರವಾರ : ಮುಂಡಗೋಡ ಸರಕಾರಿಪಾಲಿಟೆಕ್ನಿಕ್‌ ಕಾಲೇಜಿನಲ್ಲಿ 2019-20ನೇ ಸಾಲಿನ ಡಿಫ್ಲೋಮಾ ಪ್ರವೇಶಕ್ಕೆ ಖಾಲಿ ಉಳಿದಿರುವ ಸೀಟುಗಳಿಗಾಗಿ ಅರ್ಹಅಭ್ಯರ್ಥಿಗಳಿಂದ ನೇರ ಅರ್ಜಿ ಆಹ್ವಾನಿಸಲಾಗಿದೆ.

ವಿಜ್ಞಾನ ಅಥವಾ ತಾಂತ್ರಿಕ ವಿಷಯಗಳಲ್ಲಿ ಎರಡು ವರ್ಷಗಳ ಐಟಿಐ ಹಾಗೂ ಪಿಯುಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಡಿಪೊ್ಲಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಜು.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಜು.31ರಂದು ಬೆಳಗ್ಗೆ ಮೆರಿಟ್‌ ಪಟ್ಟಿಯನ್ನು ಕಾಲೇಜಿನಲ್ಲಿ ಪ್ರಕಟಿಸಲಿದ್ದು ಅಂದೇ ಮಧ್ಯಾಹ್ನ 2.30ಕ್ಕೆ ಕೌನ್ಸೆಲಿಂಗ್‌ ಮೂಲಕ ಪ್ರವೇಶ ಪ್ರಕ್ರಿಯೆ ನಡೆಯಲಿದೆ.

RELATED ARTICLES  Job News - 3484 ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭ

ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಹಾಗೂ ಪ್ರವೇಶ ಶುಲ್ಕದೊಂದಿಗೆ ಸಂದರ್ಶನಕ್ಕೆ ಹಾಜರಾಗಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಮುಂಡಗೋಡ ಸರಕಾರಿ ಪಾಲಿಟೆಕ್ನಿಕ್‌ ಅನ್ನು ಸಂಪರ್ಕಿಸಬಹುದು ಎಂದು ಪಾಲಿಟೆಕ್ನಿಕ್‌ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ಚಂಡಮಾರುತದ ಪರಿಣಾಮ ಕರ್ನಾಟಕದ ಹಲವೆಡೆ ಮಳೆಯ ಮುನ್ಸೂಚನೆ.