ಶ್ರೀಹರಿಕೋಟ: ಇಂದು ಮಧ್ಯಾಹ್ನ 2:43ಕ್ಕೆ ಯೋಜನೆಯನ್ನು ಯಶಸ್ವಿಯಾಗಿ ನಡೆಸಲಾಯಿತು . ಭಾರತದ ಬಾಹ್ಯಾಕಾಶ ಲೋಕದ ಮಹಾತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಗಗನನೌಕೆ ಮಧ್ಯಾಹ್ನ 2.43ಕ್ಕೆ ನಭಕ್ಕೆ ಚಿಮ್ಮಿದೆ ಎಂದು ತಿಳಿದುಬಂದಿದೆ.
ಬಾಹುಬಲಿ ಎಂದು ಅಡ್ಡ ಹೆಸರಿನಿಂದ ಕರೆಯಲ್ಪಡುವ ಚಂದ್ರಯಾನ-2 ಗಗನ ನೌಕೆಯನ್ನು ಜಿಎಸ್ಎಲ್ ವಿಎಂಕೆ 3-ಎಂ1 ರಾಕೆಟ್ ನಭಕ್ಕೆ ಕಳುಹಿಸಿದೆ. ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾಯಿಸಲಾಗಿದೆ ಎನ್ನಲಾಗಿದೆ.
ಈ ಉಪಗ್ರಹ ಟೆರ್ರೇನ್ ಮ್ಯಾಪಿಂಗ್ ಕ್ಯಾಮರಾ 2 ಅನ್ನು ಹೊಂದಿದೆ. ಚಂದ್ರನ ಮೇಲಿಳಿಯುವ 20 ಕೆಜಿ ತೂಕದ ರೋವರ್, ಚಂದ್ರನ ಮೇಲೆ ಸಂಚಾರ ನಡೆಸಿ ಅಲ್ಲಿಯ ಹವಾಮಾನ, ಅಲ್ಲಿನ ಕಲ್ಲು ಮತ್ತು ಮಣ್ಣಿನ ಬಗ್ಗೆ ಮಾಹಿತಿ ಸಂಗ್ರಹಿಸಿ ವಿಶ್ಲೇಷಿಸುತ್ತದೆ. ನಂತರ ಅದನ್ನು ಆರ್ಬಿಟರ್ ಮೂಲಕ ಭೂಮಿಗೆ ಕಳುಹಿಸುತ್ತದೆ. ಲ್ಯಾಂಡರ್-ರೋವರ್ನ ಆಯುಷ್ಯ 14 ದಿನಗಳಿದ್ದರೆ ಆರ್ಬಿಟರ್ 1 ವರ್ಷದವರೆಗೆ ಕೆಲಸ ನಿರ್ವಹಿಸುವ ಸಾಮರ್ಥ್ಯ ಹೊಂದಿದೆ.
ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಕೊನೆ ಗಳಿಗೆಯಲ್ಲಿ ಮುಂದೂಡಲ್ಪಟ್ಟಿತ್ತು. ಚಂದ್ರಯಾನ-2ರ ನೌಕೆಯನ್ನು ಹೊತ್ತು ನಭಕ್ಕೆ ಚಿಮ್ಮಲಿರುವ ರಾಕೆಟ್ ‘ಬಾಹುಬಲಿ’ ಮಧ್ಯಾಹ್ನ 2.45ಕ್ಕೆ ಯಶಸ್ವಿಯಾಗಿ ಉಡಾವಣೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ತಿಳಿಸಿದೆ ಎಂದು ವರದಿಯಾಗಿದೆ.