ಸ್ಟೇಟ್ ಬ್ಯಾಂಕ್ ಇಂಡಿಯಾ (ಎಸ್‌ಬಿಐ) ನೇಮಕಾತಿ 76 ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಆಗಸ್ಟ್ 12,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.
ಶೈಕ್ಷಣಿಕ ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಯಾವುದೇ ಪದವಿಯೊಂದಿಗೆ ಸಿಎ /ಎಂಬಿಎ (ಫಿನಾನ್ಸ್) ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ / ಪಿಜಿಡಿಎಂ (ಫಿನಾನ್ಸ್) ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಹುದ್ದೆಗಳಿಗೆ ಕನಿಷ್ಟ 23 ರಿಂದ ಗರಿಷ್ಟ 45 ವರ್ಷ ,ಎಸ್‌ಎಂಇ ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳಿಗೆ ಕನಿಷ್ಟ 23 ರಿಂದ 35 ವರ್ಷ ಮತ್ತು ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಡೆಪ್ಯುಟಿ ಜನರಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 68,680/- ರಿಂದ 76,520/- ರೂ, ಎಸ್‌ಎಂಇ ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,020/- ರಿಂದ 51,490/-ರೂ ಮತ್ತು ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್ https://bank.sbi/careers/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 12,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.