ಕುಮಟಾ: 2019-20 ನೇ ಶೈಕ್ಷಣಿಕ ವರ್ಷದ ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಬಿ.ಕಾಂ. 1 ನೇ ಸೆಮಿಸ್ಟರಿನ ವಿದ್ಯಾರ್ಥಿನಿ ಶ್ರೇಯಾ ನಾಯಕ ಇವಳು ಜೂನ್‍ನಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ 200 ಕ್ಕೆ 147 ಅಂಕಗಳನ್ನು ಪಡೆದು ಉತ್ತೀರ್ಣಳಾಗಿದ್ದಾಳೆ.
ಇವಳು ಬಾಳಿಗಾ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದು, ಪಿಯುಸಿ ದ್ವಿತೀಯ ವರ್ಷದಲ್ಲಿ ಶೇ.95 ಪ್ರತಿಶತ ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಯನ್ನು ಕೆನರಾ ಕಾಲೇಜು ಸೊಸೈಟಿಯ ಕಾರ್ಯಾಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತ ಮಂಡಳಿಯ ಎಲ್ಲ ಸದಸ್ಯರು, ಕಾಲೇಜಿನ ಪ್ರಾಚಾರ್ಯರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.