ಕಾರವಾರ : ಕನ್ನಡ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿ ಮತ್ತು ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರೀಯಾಶೀಲತೆಯನ್ನು ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಕನಿಷ್ಠ 5 ರಿಂದ 15 ಮಂದಿ ವಿದ್ಯಾರ್ಥಿಗಳನ್ನೊಳಗೊಂಡಂತೆ ಕಾರ್ಯಾಕಾರಿ ಸಮಿತಿಯೊಂದನ್ನು ರಚಿಸಿಕೊಂಡು ಆಯಾ ಕಾಲೇಜುಗಳ ಪ್ರಾಶುಂಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕಾಲೇಜಿನಲ್ಲಿ ಕನ್ನಡ ಸಾಹಿತ್ಯಿಕ ವಾತಾವರಣವನ್ನು ಕ್ರೀಯಾಶೀಲವಾಗಿಡುವ ನಿಟ್ಟಿನಲ್ಲಿ ವರ್ಷದಲ್ಲಿ 2 ಕಾರ್ಯಕ್ರಮಗಳಂತೆ ಕನ್ನಡ ಸಾಹಿತ್ಯ ಚಟುವಟಿಕೆಯನ್ನು ಈ ಬಳಗವು ಹಮ್ಮಿಕೊಳ್ಳಬೇಕಾಗುತ್ತದೆ. ಇದಕ್ಕಾಗಿ ಪ್ರಾಧಿಕಾರದಿಂದ ಕಾರ್ಯಕ್ರಮ ಒಂದಕ್ಕೆ ರೂ. 5 ಸಾವಿರ ಗರಿಷ್ಠ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸಲಾಗುವದು.
ಅಲ್ಲದೆ ಪ್ರಾಧಿಕಾರವು ಹಮ್ಮಿಕೊಳ್ಳುವ ಎಲ್ಲಾ ಯೋಜನೆ ಹಾಗೂ ಕಾರ್ಯಕ್ರಮಗಳಲ್ಲಿ ಈ ಜಾಣ ಜಾಣೆಯರ ಬಳಗವನ್ನು ತೊಡಗಿಸಿಕೊಳ್ಳಲಾಗುವುದು.
ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಸಹಾಯಕ ನಿದೇರ್ಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆÀಯ ಕಚೇರಿ ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್ www.knnadapustakapradhikara.com ನಲ್ಲಿ ಪಡೆಯಬಹುದು.