ಬೆಂಗಳೂರು : ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಾಗದೆ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಬಿಜೆಪಿ ಹೈಕಮ್ಯಾಂಡ್ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಇಂದು ಸಂಜೆ 6 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ನೂತನ ಮುಖ್ಯಮಂತ್ರಿಯಾಗಿ 4ನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಹಿರಿಯ, ಕಿರಿಯ ನಾಯಕರು, ಬೆಂಬಲಿಗರು ಸೇರಿದಂತೆ ಅನೇಕ ಗಣ್ಯರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗಣ್ಯ ವ್ಯಕ್ತಿಗಳ ಸಂಚಾರಕ್ಕೆ ಅನುವು ಮಾಡಿಕೊಡುವ ಸಲುವಾಗಿ ಸಂಚಾರ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ವರದಿಯಾಗಿದೆ.
.