ಬೆಂಗಳೂರು: 2017 ರ ಡಿಸೆಂಬರ್ ತಿಂಗಳಿನಲ್ಲಿ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಪರೇಶ ಮೇಸ್ತಾ ಎಂಬ ಯುವಕನ ಸಾವಿನ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟಿಸಿದ್ದ ಅನೇಕ ಹಿಂದೂ ಕಾರ್ಯಕರ್ತರ ಮೇಲೆ ಕ್ರಿಮಿನಲ್ ಹಾಗೂ ಸಾಮಾಜಿಕ ಜಾಲತಾಣಕ್ಕೆ ಸಂಬಂದಿಸಿದಂತೆ 150 ಕ್ಕೂ ಹೆಚ್ಚೂ ಪ್ರಕರಣಗಳು ದಾಖಲಾಗಿದ್ದವು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2000 ಕ್ಕೂ ಅಧಿಕ ಹಿಂದೂ ಯುವಕರ ಮೇಲೆ ಹೇರಿರುವ ಪ್ರಕರಣವನ್ನು ಹಿಂಪಡೆಯುವಂತೆ ಕೋರಿ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ರೂಪಾಲಿ ಎಸ್. ನಾಯ್ಕರವರು ಕರ್ನಾಟಕದ ನೂತನ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪರವರಲ್ಲಿ ದಿನಾಂಕ 29/07/2019 ರಂದು ಭೋಜನ ವಿರಾಮದ ಸಂದರ್ಭದಲ್ಲಿ ಮನವಿ ಸಲ್ಲಿಸಿದ್ದು ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಪರೇಶ್ ಮೇಸ್ತಾ
ಹಾಗೆಯೇ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳು ಅದೇ ದಿನ ಸಂಜೆ ಅಪರ ಮುಖ್ಯ ಕಾರ್ಯದರ್ಶಿ ಒಳಾಡಳಿತ ಇಲಾಖೆ, ಇವರಿಗೆ ಪತ್ರ ಬರೆದು ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸದ್ದು ಶೀಘ್ರದಲ್ಲೇ ಪ್ರಕರಣ ಹಿಂಪಡೆಯುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.