ಭಟ್ಕಳ: ಇಲ್ಲಿನ ರಾಬಿತಾ ಸೂಸೈಟಿ ವತಿಯಿಂದ ಅ.2 ರಂದು ಶುಕ್ರವಾರ ಸಂಜೆ 4.45ಕ್ಕೆ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲಾ ಮೈದಾನದಲ್ಲಿ ಪ್ರತಿಷ್ಠಿತ ರಾಬಿತಾ ಶೈಕ್ಷಣಿಕ ಪ್ರಶಸ್ತಿ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು  ಸಂಸ್ಥೆಯ ಅಧ್ಯಕ್ಷ ಝಾಹಿದ್ ರುಕ್ನುದ್ದೀನ್ ತಿಳಿಸಿದ್ದಾರೆ. 

ಪ್ರಶಸ್ತಿ ಪುರಸ್ಕಾರ ಸಮಾರಂಭದ ಕುರಿತು ಮಂಗಳವಾರ ಸಂಜೆ ನವಾಯತ್ ಕಾಲೋನಿಯ ರಾಬಿತಾ ಸೂಸೈಟಿ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 

ರಾಬಿತಾ ಸಂಸ್ಥೆಯು ಅಲ್ಪಸಂಖ್ಯಾತರ ವಿಶೇಷವಾಗಿ ಮುಸ್ಲಿಮ್ ಸಮುದಾಯದ ಶೈಕ್ಷಣಿಕ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಳೆದ 22 ವರ್ಷಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕರಿಸುತ್ತ ಬಂದಿದೆ. ಹಿಂದೆ ಶೇ.75% ಅಂಕಗಳಿಗೆ ಸೀಮಿತವಾಗಿದ್ದ ಸಮುದಾಯದ ವಿದ್ಯಾರ್ಥಿಗಳು ಈಗ ಶೇ98% ಫಲಿತಾಂಶವನ್ನು ಪಡೆಯುತ್ತಿದ್ದಾರೆ. ರಾಬಿತಾ ಸಂಸ್ಥೆಯ ಪುರಸ್ಕಾರದಿಂದಾಗಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಯಲು ಸಾಧ್ಯವಾಗಿದೆ ಎಂದರು. ರಾಬಿತಾ ಸಂಸ್ಥೆಯು ಭವಿಷ್ಯದಲ್ಲಿ ಎಲ್ಲ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕರಿಸುವ ಯೋಜನೆಯನ್ನು ಹಾಕಿಕೊಂಡಿದೆ ಎಂದ ಅವರು, ಎಸ್.ಎಸ್.ಎಲ್.ಸಿ, ಪಿ.ಯು.ಸಿ ಮತ್ತು ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮುಸ್ಲಿಮ ಸಮುದಾಯದ ವಿದ್ಯಾರ್ಥಿಗಳು ರಾಬಿತಾ ಶೈಕ್ಷಣಿಕ ಪುರಸ್ಕಾರಕ್ಕೆ ಬಾಜನರಾಗಲಿದ್ದಾರೆ. ಅಲ್ಲದೆ ಉತ್ತಮ ಶಿಕ್ಷಕ ಪ್ರಶಸ್ತಿ, ಉತ್ತಮ ಶಾಲಾ ಪ್ರಶಸ್ತಿಯನ್ನು ಈ ಸಂದರ್ಭದಲ್ಲಿ ನೀಡಲಾಗುವುದು. ರಾಬಿತಾ ಸಂಸ್ಥೆ ಕೇವಲ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಕಾರ್ಯಗಳನ್ನು ಮಾಡುತ್ತ ಬಂದಿದೆ. ಸಂಸ್ಥೆಯಿಂದ ಅಂಬ್ಯುಲನ್ಸ್ ಸೇವೆ, ಪರಿಸರ ಜಾಗೃತಿ, ಸ್ವಚ್ಚ ಭಟ್ಕಳ, ಸರ್ಕಾರಿ ಶಾಲೆಗಳಿಗೆ ಪೀಠೋಪಕರಣ ವಿತರಣೆ ಸೇರಿದಂತೆ ಹಲವು ಚಟುವಟಿಕೆಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ ಸಮಾಜದಲ್ಲಿ ಶಾಂತಿ ಸೌಹಾರ್ಧತೆ ಕಾಪಾಡುವ ನಿಟ್ಟಿನಲ್ಲೂ ಇದು ಸಕ್ರೀಯವಾಗಿದೆ ಎಂದರು. 

RELATED ARTICLES  12 ಜನವರಿಯಂದು ನಾವು ನಮ್ಮಿಷ್ಟ ಫೇಸ್ಬುಕ್ ಗುಂಪಿನ 6ನೇ ಸ್ನೇಹ ಸಮ್ಮೇಳನ

ಆ.2 ರಂದು ನಡೆಯುವ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಮುಂಬಾಯಿ ಯ ಅಂಜುಮನ್ ಇಸ್ಲಾಮ್ ಸಂಸ್ಥೆಯ ಅಧ್ಯಕ್ಷ ಡಾ.ಝಹೀರ್ ಐ. ಖಾಜಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. 

RELATED ARTICLES  ರಾಜೇಂದ್ರ ನಾಯ್ಕಗೆ ಅದ್ಧೂರಿ ಸ್ವಾಗತ!