ಬೆಂಗಳೂರು : ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕರಾಗಿದ್ದ ಶಿವರಾಮ ಹೆಬ್ಬಾರ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ಆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ. ಬರಲಿರುವ ಉಪಚುನಾವಣೆಯಲ್ಲಿ ಶಿವರಾಮ ಹೆಬ್ಬಾರ ಬಿಜೆಪಿಯಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದ್ದು ಅವರ ತೆರವಾದ ಸ್ಥಾನಕ್ಕೆ ಆರ್ ವಿ ದೇಶಪಾಂಡೆ ಪುತ್ರ ಪ್ರಶಾಂತ ದೇಶಪಾಂಡೆ ಅವರನ್ನ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ ಈಗಾಲೆ ತಿರ್ಮಾನಿಸಿದೆ ಎನ್ನಲಾಗುತ್ತಿದೆ.
ಅಷ್ಟೆ ಅಲ್ಲ ಸ್ಪರ್ಧೆ ಮಾಡಲು ಪ್ರಶಾಂತ ದೇಶಪಾಂಡೆ ಸಹ ಒಪ್ಪಿಗೆ ಸೂಚಿಸಿದ್ದಾರೆ ಎನ್ನುವ ಬಗ್ಗೆ ಕ್ರಾಂಗ್ರೆಸ್ ವಲಯದಿಂದ ಕೇಳಿಬರುತ್ತಿದೆ. ಶಿವರಾಮ ಹೆಬ್ಬಾರ ಎರಡು ಬಾರಿ ಕಾಂಗ್ರೆಸ್ ನಿಂದ ಗೆದ್ದು ಬಂದಿದ್ದರು. ಆದ್ರೆ ಕ್ಷೇತ್ರದ ಅಭಿವೃದ್ಧಿಗಾಗಿ ದೋಸ್ತಿ ಸರಕಾರ ಸ್ಪಂಧಿಸಿಲ್ಲ ಎನ್ನುವ ಕಾರಣ ಹೇಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ದೋಸ್ತಿ ಸರಕಾರ ಪತನವಾಗುವಲ್ಲಿ ಹೆಬ್ಬಾರ ಪಾತ್ರ ಸಹ ಇದೆ ಎನ್ನುವುದು ಕಾಂಗ್ರೆಸ್ ನಾಯಕರಿಗೆ ಗೋತ್ತಿರವ ವಿಚಾರ ಹೀಗಾಗಿ ಹೇಗಾದರೂ ಮಾಡಿ ಯಲ್ಲಾಪುರ ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಗೆಲ್ಲಬೇಕು ಎಂಬ ಕಾರಣಕ್ಕೆ ರಾಜ್ಯದ ಪ್ರಭಾವಿ ರಾಜಕಾರಣಿ ಆರ್ ವಿ ದೇಶಪಾಂಡೆ ಅವರ ಪುತ್ರ ಪ್ರಶಾಂತ ದೇಶಪಾಂಡೆ ಅವರನ್ನ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ ಎನ್ನುವ ಮಾತು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರುತ್ತಿದೆ.