ನವದೆಹಲಿ: 
ಜಮ್ಮು-ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಆರ್ಟಿಕಲ್ 35ಎ, 370 ನ್ನು ರದ್ದುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಜಮ್ಮು-ಕಾಶ್ಮೀರಕ್ಕೆ ಇದ್ದ ರಾಜ್ಯದ ಸ್ಥಾನಮಾನವನ್ನೂ ವಾಪಸ್ ಪಡೆದಿದೆ. 

RELATED ARTICLES  ಕೇಂದ್ರ ಬಜೆಟ್ 2018: ಯಾವುದು ಅಗ್ಗ? ಯಾವುದು ದುಬಾರಿ? ಇಲ್ಲಿದೆ ಮಾಹಿತಿ


ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಸಂಸತ್ ನಲ್ಲಿ ಹೇಳಿದ್ದು, ಜಮ್ಮು-ಕಾಶ್ಮೀರವನ್ನು ವಿಭಜನೆ ಮಾಡುವ ಐತಿಹಾಸಿಕ ನಿರ್ಣಯವನ್ನು ಘೋಷಿಸಿದ್ದಾರೆ. 
ಜಮ್ಮು-ಕಾಶ್ಮೀರದಿಂದ ಲಡಾಕ್ ನ್ನು ಪ್ರತ್ಯೇಕಗೊಳಿಸಿ, ಎರಡೂ ಪ್ರದೇಶಗಳು ಇನ್ನು ಮುಂದಿನ ದಿನಗಳಲ್ಲಿ ಕೇಂದ್ರಾಡಳಿತ ಪ್ರದೇಶವಾಗಿರಲಿವೆ. ಜಮ್ಮು-ಕಾಶ್ಮೀರ ವಿಧಾನಸಭೆ ಹೊಂದಿರುವ ಕೇಂದ್ರಾಡಳಿತ ಪ್ರದೇಶವಾಗಲಿದ್ದರೆ, ಲಡಾಕ್ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಿರಲಿದೆ. 

RELATED ARTICLES  ಚಿತ್ರಮಂದಿರದಲ್ಲಿ ರಾಷ್ಟ್ರಗೀತೆ: ದೇಶಭಕ್ತಿ ತೋರಲು ಎದ್ದು ನಿಲ್ಲಬೇಕಿಲ್ಲ-ಕೇಂದ್ರಕ್ಕೆ ಸುಪ್ರೀಂ