ನವದೆಹಲಿ: ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರು ಅನಾರೋಗ್ಯದಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ.
67 ವರ್ಷದ ಸುಷ್ಮಾ ಸ್ವರಾಜ್ ಅವರಿಗೆ ಹೃದಯಾಘಾತವಾಗಿದ್ದರಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೇನು ಕೆಲಹೊತ್ತಿನಲ್ಲೇ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ. ಸುಷ್ಮಾ ಸ್ವರಾಜ್ ನಿಧನ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಏಮ್ಸ್‌ಗೆ ದೌಡಾಯಿಸಿದ್ದಾರೆ.
2014ರ ನರೇದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ಸುಷ್ಮಾ ಸ್ವರಾಜ್ 5 ವರ್ಷ ಪೂರೈಸಿದ್ದರು.
ಬಿಜೆಪಿಯ ಹಿರಿಯ ಮಹಿಳಾ ನಾಯಕಿಯಾಗಿದ್ದ ಸುಷ್ಮಾ ಸ್ವರಾಜ್ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಯಿಂದ ದೂರ ಉಳಿದಿದ್ದರು.
ಅನಾರೋಗ್ಯದಿಂದಾಗಿ ಕಳೆದ ನವೆಂಬರ್‌ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎನ್ನುವ ವಿಚಾರವನ್ನು ಘೋಷಿಸಿದ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿ ರದ್ದು ಹಿನ್ನೆಲೆಯಲ್ಲಿ ಇಂದು ಟ್ವೀಟ್ ಮಾಡಿದ್ದ ಸುಷ್ಮಾ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ್ದರು.