ಕಾರವಾರ: ಕರಾವಳಿ ಭಾಗದಲ್ಲಿ ತೀವ್ರ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಕಡಲ ತೀರಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ಮುಂದಿನ 48 ಗಂಟೆ ತೆರಳದಂತೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಆದೇಶಿಸಿದ್ದಾರೆ.

ಕರಾವಳಿ ಭಾಗದಲ್ಲಿ ತೀವ್ರ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಕಡಲತೀರಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ತೆರಳದಂತೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಆದೇಶಿಸಿದ್ದಾರೆ. ಬೊಮ್ಮನಹಳ್ಳಿ, ಕೊಡಸಳ್ಳಿ ಹಾಗೂ ಕದ್ರಾ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಆಗುತ್ತಿದ್ದು ಈ ಮೂರು ಜಲಾಶಯಗಳಿಂದ ನೀರು ಬಿಡಲಾಗುವುದು. ಈ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯುವುದರಿಂದ ನದಿಪಾತ್ರದಲ್ಲಿ ವಾಸಿಸುವ ಜನರು ಎತ್ತರದ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

RELATED ARTICLES  ನಿನ್ನೆ ಹೋದವನು ಇಂದು ಹೆಣವಾಗಿ ಸಿಕ್ಕ: ಮುರ್ಡೇಶ್ವರದಲ್ಲಿ ನಡೆದ ಘಟನೆ ಸುತ್ತ ಅನುಮಾನಗಳ ಹುತ್ತ.!!