ಕಾರವಾರ : ದಕ್ಷಿಣ ಕನ್ನಡ ,ಉಡುಪಿ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರವಾಸ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಾತ್ಕಾಲಿಕ ಪಟ್ಟಿಯಲ್ಲಿ ಈ ವಿವರ ಇದೆ ಎನ್ನಲಾಗಿದೆ. ಮುಂದಿನ ಬದಲಾವಣೆ ನಿರೀಕ್ಷಿಸಿದೆ.

ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು 12.8.2019ರಂದು ದಕ್ಷಿಣ ಕನ್ನಡ,ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ನೆರೆ ಹಾನಿ ವೀಕ್ಷಣೆ ಮಾಡುವರು,ಅಂದು ಕಾರವಾರದಲ್ಲಿ ವಾಸ್ತವ್ಯ ಹೂಡಿ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಜೊತೆ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸುವರು.

RELATED ARTICLES  ಸಿ.ವಿ.ಎಸ್.ಕೆ ವಿದ್ಯಾರ್ಥಿಗಳಿಂದ ಶ್ರಮದಾನ

13.8.2019ರಂದು ಕಾರವಾರದಿಂದ ಹೊರಟು ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳ ಮಳೆಹಾನಿ ಕುರಿತು ಪರಿಶೀಲನೆ ನಡೆಸಿ ಬೆಂಗಳೂರಿಗೆ ವಾಪಸಾಗುವರು.

ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಆದ ಪ್ರವಾಹದ ಹಾನಿ ಕುರಿತು ಅಧಿಕಾರಿಗಳು ಸರ್ವೆ ನಡೆಸಿ ಮಾಹಿತಿ ನೀಡುವಂತೆ ಸೂಚಿಸಲಾಗಿದ್ದು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸರ್ವೆ ಕಾರ್ಯ ಬರದಿಂದ ಸಾಗುತ್ತಿದೆ.

RELATED ARTICLES  ಸ್ಪೀಕರ್ ವಿರುದ್ಧ ಫೇಸ್ ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ : ದೂರು ದಾಖಲು.