ಕಾರವಾರ: ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿರುವ 2.637 ಗ್ರಾಮೀಣ ಅಂಚೆ ನೌಕರರ ಹುದ್ದೆಯನ್ನು ಭರ್ತಿ ಮಾಡಲು ಎಸ್‍ಎಸ್‍ಎಲ್‍ಸಿ ತೇರ್ಗಡೆ ಹೊಂದಿರುವ 18 ರಿಂದ 40 ವರ್ಷ ವಯೋಮಿತಿಯ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಸೆ. 4 ರೊಳಗಾಗಿ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ತಮ್ಮ ಹೆಸರನ್ನು https://indiapost.gov.in ಅಥವಾ http://appost.in/gdsonline ರಲ್ಲಿ ಅಂತರ್ಜಾಲದ ಮೂಲಕ ನೊಂದಾಯಿಸಬಹುದು. ಇತರ ಹಿಂದುಳಿದ ವರ್ಗಗಳ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ರಾಜ್ಯದ ಯಾವುದೇ ಮುಖ್ಯ ಅಂಚೆ ಕಚೇರಿಯಲ್ಲಿ ಅಥವಾ ಆಯ್ದ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು.
ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಅನುಸೂಚಿತ ಜಾತಿ ಹಾಗೂ ಬುಡಕಟ್ಟು ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯಿದ್ದು ಹಾಗೂ ಹಿಂದುಳಿದ ವರ್ಗಗಳ, ಅನುಸೂಚಿತ ಜಾತಿ ಮತ್ತು ಬುಡಕಟ್ಟು ಜನಾಂಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಅರ್ಜಿದಾರರು ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ http://appost.in/gdsonline ವೆಬ್‍ಸೈಟ್‍ನಲ್ಲಿ ಮಾಹಿತಿ ಲಭ್ಯವಿದೆ.