ಕುಮಟಾ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್‍ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಶಾಲ್ಮಲಿ ಮಣಕಿಕರ್ ಇವಳು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ 2018-19 ನೇ ಸಾಲಿನಲ್ಲಿ 9 ರಿಂದ 12ನೇ ವರ್ಗದ ವಿದ್ಯಾರ್ಥಿಗಳಿಗೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಇವಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶೈಕ್ಷಣಿಕ ಸಲಹೆಗಾರರು, ಮುಖ್ಯಾಧ್ಯಾಪಕರು, ಶಿಕ್ಷಕ ವರ್ಗ ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ, ಮುಂದಿನ ಹಂತದ ಸ್ಪರ್ಧೆಗೆ ಶುಭಕೋರಿದ್ದಾರೆ.