ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ನಿರ್ವಹಿಸಲು ರಾಜ್ಯ ಸರ್ಕಾರ 195 ಕೋಟಿ ರೂ ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸೂಚನೆ ಅನುಸಾರ ಪರಿಹಾರ ಕಾರ್ಯಕೈಗೊಳ್ಳಲು, ನೆರೆ ಸಂತ್ರಸ್ತರಿಗೆ ಬಟ್ಟೆ, ಅಗತ್ಯ ವಸ್ತುಗಳನ್ನು ಒದಗಿಸುವುದು ಸೇರಿದಂತೆ ಪರಿಹಾರ ಕಾಮಗಾರಿ ಚುರುಕುಗೊಳಿಸಲು ಹಣ ಬಿಡುಗಡೆ ಮಾಡಲಾಗಿದೆ.
ಪ್ರವಾಹ ಸಂತ್ರಸ್ತ ತಾಲ್ಲೂಕುಗಳಲ್ಲಿ ಬಾಧಿತರಾದವರಿಗೆ ತಕ್ಷಣಕ್ಕೆ ಅಗತ್ಯ ವಸ್ತುಗಳ ಖರೀದಿಗಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ ನಂತೆ ವಿತರಿಸಲು, ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ರಾಜ್ಯ ಸರ್ಕಾರದ ಹೆಚ್ಚುವರಿ ಪಾಲಿನ ಅನುದಾನದಿಂದ 80 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.