ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕವಲಕ್ಕಿಯಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿನೂತನವಾಗಿ ಮಕ್ಕಳೇ ಆಚರಿಸಿದರು. ಈ ಸಂದರ್ಭದಲ್ಲಿ ಶ್ರೀ ಭಾರತಿ ಎಜುಕೇಶನ್ ಟ್ರಸ್ಟನ ಆಡಳಿತ ಮಂಡಳಿಯವರು ಎಲ್ಲಾ ಶಿಕ್ಷಕರಿಗೆ ಶುಭಕೋರಿದರು.


ಶಿಕ್ಷಕ ದಿನಾಚರಣೆಯ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳು ಹಿರಿಯ ಶಿಕ್ಷಕಿಯಾದ ಶ್ರೀಮತಿ ವನಿತಾ ಪಿಂಟೋರವರನ್ನು ಸನ್ಮಾನಿಸಿದರು ಹಾಗೂ ಶಾಲೆಯ ಎಲ್ಲಾ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು. ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ವೈಲೆಟ್ ಫರ್ನಾಂಡೀಸ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಲೆಯ ವಿದ್ಯಾರ್ಥಿಗಳಾದ ನಿಸರ್ಗಾ ಗೌಡ ಕಾರ್ಯಕ್ರಮವನ್ನು ನಿರೂಪಿಸಿದರು. ಉತ್ಸವಿ ಹೆಗಡೆ ಸ್ವಾಗತಿಸಿದರು, ನೀರಜ್ ಹೆಗಡೆ ವಂದಿಸಿದರು.

RELATED ARTICLES  ಉತ್ತರಕನ್ನಡದಲ್ಲಿ ಮತ್ತೆ ಏರಿದ ಕೊರೋನಾ..! ಇಂದು ಎರಡು ಸಾವು