ಕುಮಟಾ: ಶಿಕ್ಷಕರು ಯಾವುದೇ ಸ್ಥಳಗಳಿಗೂ ಹೋಗಿ ಕರ್ತವ್ಯ ನಿರ್ವಹಿಸಲು ಸಿದ್ಧರಿರಬೇಕು. ಶಿಕ್ಷಣ ವ್ಯಕ್ತಿಯ ಹಾಗೂ ದೇಶದ ಭವಿಷ್ಯವನ್ನು ರೂಪಿಸುತ್ತದೆ. ಅಂತಹ ಶಿಕ್ಷಣವನ್ನು ಒದಗಿಸಲು ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು.

ಜಿ.ಪಂ ಉತ್ತರಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉ.ಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಕುಮಟಾ ಇವರ ಸಂಯುಕ್ತಾಶ್ರಯದಲ್ಲಿ ಪಟ್ಟಣದ ನಾಮಧಾರಿ ಸಭಾಭವನದಲ್ಲಿ ಗುರುವಾರ ಆಯೋಜಿಸಿದ ತಾಲೂಕಾ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು. ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಶಾಲೆಗಳಲ್ಲಿ ಹೆಚ್ಚಿನ ಪ್ರಾಧಾನ್ಯತೆ ನೀಡಿ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಅಂತಹ ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ಶಿಕ್ಷಣವನ್ನು ಒದಗಿಸಿ, ಸುಭದ್ರ ದೇಶದ ನಿರ್ಮಾಣಕ್ಕೆ ಶ್ರಮಿಸಿ ಎಂದರು.

RELATED ARTICLES  ಬಾಲಕಿಯ ಸಮಯ ಪ್ರಜ್ಞೆ : ತಪ್ಪಿದ ಭಾರೀ ಅನಾಹುತ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಪಂ ಅಧ್ಯಕ್ಷೆ ವಿಜಯಾ ಪಟಗಾರ ವಹಿಸಿದ್ದರು. ಜಿ.ಪಂ ಸ್ಥಾಯಿ ಸಮಿತಿ ಸದಸ್ಯ ರತ್ನಾಕರ ನಾಯ್ಕ, ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ, ಎಸ್.ಬಿ.ಐ ವ್ಯವಸ್ಥಾಪಕ ಎಂ. ಜನಾರ್ಧನ ನಾಯಕ, ಇಓ ಸಿ.ಟಿ.ನಾಯ್ಕ ಇನ್ನಿತರರು ಮಾತನಾಡಿದರು.

RELATED ARTICLES  ಭಟ್ಕಳದ ಈ ಗ್ರಾಮದ ರಸ್ತೆಗೆ ಇಲ್ಲ ಡಾಂಬರ್ : ನಾಟಿಮಾಡಿ ಪ್ರತಿಭಟಿಸಿದ ಗ್ರಾಮಸ್ಥರು..

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ನಾಗಾಂಜಲಿ ನಾಯ್ಕ, ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಣೀತ ರವಿರಾಜ ಕಡ್ಲೆಯವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಈ ವೇಳೆ ಹಲವು ನಿವೃತ್ತ ಶಿಕ್ಷಕರನ್ನು ವಿಶೇಷವಾಗಿ ಸನ್ಮಾನಿಸಿ, ಗೌರವಿಸಲಾಯಿತು.