ಕುಮಟಾ : ರಾಜ್ಯದ 22 ಜಿಲ್ಲೆಗಳಲ್ಲಿ ಭೀಕರ ಪ್ರವಾಹದಿಂದ ನೆರೆ ಉಂಟಾಗಿ, ಲಕ್ಷಾಂತರ ಜನ ಮನೆ, ಆಸ್ತಿಪಾಸ್ತಿ, ದನಕರುಗಳನ್ನು ಕಳೆದುಕೊಂಡಿದ್ದಾರೆ ಅಲ್ಲದೆ ಎಷ್ಟೋ ಜನರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ.. ಇಷ್ಟೆಲ್ಲಾ ಅನಾಹುತ ಉಂಟಾದರೂ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂತೃಸ್ತರಿಗೆ ಸೂಕ್ತ ಪರಿಹಾರ ಒದಗಿಸಲು ವಿಫಲವಾಗಿರುವುದನ್ನು ವಿರೋಧಿಸಿ ಇಂದು ಕುಮಟಾದ ತಹಶೀಲ್ದಾರರ ಕಛೇರಿಯ ಎದುರುಗಡೆ ಬ್ಲಾಕ್ ಕಾಂಗ್ರೆಸ್ ಕುಮಟಾ ಇದರ ವತಿಯಿಂದ ಪ್ರತಿಭಟನೆ ನಡೆಸಿ, ತಹಶೀಲ್ದಾರರ ಮುಖಾಂತರ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಾರದಾ ಎಂ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಲ್.ನಾಯ್ಕ, ಮುಖಂಡರಾದ ನಾಗೇಶ್. ನಾಯ್ಕ, ರವಿಕುಮಾರ್ ಎಂ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಸುರೇಖಾ ವಾರೀಕರ್, ಜಿಲ್ಲಾ ಪಂಚಾಯತ್ ಸದಸ್ಯರಾದ ರತ್ನಾಕರ ನಾಯ್ಕ, ತಾಲೂಕು ಪಂಚಾಯತ್ ಸದಸ್ಯರುಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು/ ಸದಸ್ಯರುಗಳು, ಪುರಸಭಾ ಸದಸ್ಯರು, ಬ್ಲಾಕ್ ಕಾಂಗ್ರೆಸ್ ವಿವಿಧ ಘಟಕದ ಅಧ್ಯಕ್ಷರು/ ಪದಾಧಿಕಾರಿಗಳು, ಹಿರಿಯ ಕಿರಿಯ ಮುಖಂಡರುಗಳು, ಕಾರ್ಯಕರ್ತರು, ನೆರೆ ಸಂತ್ರಸ್ತರು ಹಾಜರಿದ್ದರು…