ಕುಮಟಾ : ತಾಲೂಕಿನ ಕಾಗಾಲ್ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತರು ದೇವಕಿ ಕೃಷ್ಣ ಸಭಾಭವನದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಈ ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, ಪೌಷ್ಟಿಕ ಆಹಾರ ಪ್ರದರ್ಶನ, ಏಳರಿಂದ ಎಂಟು ತಿಂಗಳ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ ಹಾಗೂ ಮಕ್ಕಳ ಹುಟ್ಟುಹಬ್ಬ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.

RELATED ARTICLES  ಭಟ್ಕಳದಲ್ಲಿ ಎಂಟಕ್ಕೆ ಏರಿದ ಕರೋನಾ ಸೋಂಕಿತರ ಸಂಖ್ಯೆ: ಎಲ್ಲೆಡೆ ಕಟ್ಟೆಚ್ಚರ

ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಕಾಗಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೀತಾ ಹಾಗೇರ್, ವೈದ್ಯಾಧಿಕಾರಿಗಳಾದ ಡಾ. ಸತೀಶ್ ಭಟ್, ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು , ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ವಿಜಯಾ ನಾಯ್ಕ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

RELATED ARTICLES  ಶ್ರೀಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಯಕ್ರಮದಲ್ಲಿ ಅನೇಕ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, ಪೌಷ್ಟಿಕ ಆಹಾರಗಳ ಪ್ರದರ್ಶನ ಹಾಗೂ ಏಳರಿಂದ ಎಂಟು ತಿಂಗಳ ಮಕ್ಕಳಿಗೆ ಅನ್ನ ಪ್ರಾಶನ ಕಾರ್ಯಕ್ರಮ, ಮಕ್ಕಳ ಹುಟ್ಟುಹಬ್ಬದ ಕಾರ್ಯಕ್ರಮಗಳು ಎಲ್ಲರ ಮೆಚ್ಚುಗೆಗಳಿಸಿದವು .