ಬೆಂಗಳೂರಿನ ಫೌರ್ ಸೀಸನ್ ಹೋಟೆಲ್ ನಲ್ಲಿ ಬಿ.ಆರ್.ಶೆಟ್ಟಿ ಅವರ ಜೊತೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಶಾಸಕರಾದ ದಿನಕರ ಶೆಟ್ಟಿಯವರು ಮಾತುಕತೆ ನಡೆಸಿದ್ದಾರೆ.
ಮುಂದಿನ ಅಕ್ಟೋಬರ್ 5 ರಂದು ಡಾ|| ಕುಶಾಲ್ ಶೆಟ್ಟಿ ಅವರು ಸ್ಥಳ ಪರಿಶೀಲನೆಗೆ ಬರಲಿದ್ದಾರೆ.
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ನಾನು ನನ್ನ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಸದಾ ಜನರ ಸುರಕ್ಷತೆ ಕುರಿತು ನನ್ನ ಹೆಜ್ಜೆ ಎಂದು ಶಾಸಕರು ತಿಳಿಸಿದ್ದಾರೆ.