ಕುಮಟಾ: ತಾಲೂಕಿನ ದೀವಗಿಯಲ್ಲಿ ಹಾದು ಹೋಗಿರುವ ಚತುಷ್ಪದ ರಾಷ್ಟ್ರೀಯ ಹೆದ್ದಾರಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ರಸ್ತೆ ದಾಟಲು ತೀವ್ರ ತೊಂದರೆಯಾಗುತ್ತಿದೆ. ಶೀಘ್ರದಲ್ಲಿ ಓವರ್ ಬ್ರೀಡ್ಜ್ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ನೂರಾರು ಗ್ರಾಮಸ್ಥರು ಪ್ರತಿಭಟನೆ ಹಮ್ಮಿಕೊಂಡಿದ್ದರು. ನೂರಾರು ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

RELATED ARTICLES  ಮಾನವ ಪರಾವಲಂಬನೆಯೆಡೆಗೆ ಸಾಗುತ್ತಿರುವುದು ಕೃಷಿ ಕ್ಷೇತ್ರದ ದುರಂತ : ಡಾ. ಶ್ರೀಧರ ಬಳಗಾರ

ಸ್ಥಳಕ್ಕಾಗಮಿಸಿದ ಶಾಸಕ ದಿನಕರ ಶೆಟ್ಟಿ ಮಾತನಾಡಿ, ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಮುಂದಿನ ದಿನಗಳಲ್ಲಿ ಇದರ ಕುರಿತು ಹೋರಾಟ ಮಾಡುತ್ತೇನೆ ಎಂದು ಭರವಸೆ ನೀಡಿದರು.

RELATED ARTICLES  ನಾಳೆಯಿಂದ ಹೊನ್ನಾವರದಲ್ಲಿಯೂ ಸ್ವಯಂ ಪ್ರೇರಿತ ಲಾಕ್ ಡೌನ್..!

ಶಾಸಕರು ಮತ್ತು ಹೆದ್ದಾರಿ ಪ್ರಾಧಿಕಾರಿಯವರು ಲಿಖಿತ ಭರವಸೆ ನೀಡಿದ ನಂತರ ಪ್ರತಿಭಟನೆ ಮುಕ್ತಾಯಗೊಳಿಸಿದರು.

ಪ್ರಮುಖರಾದ ಆರ್.ಕೆ.ಅಂಬಿಗ, ಹೇಮಂತ ಗಾವ್ಕರ, ಗಜಾನನ ಪೈ ಮತ್ತಿತರು ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು.