ಕುಮಟಾ : ವಿದ್ಯಾರ್ಥಿಗಳು NSS ಶಿಬಿರದಲ್ಲಿ ಕಲಿತುಕೊಂಡ ಅಂಶಗಳನ್ನು ಬದುಕಿನಲ್ಲಿಯೂ ಪಾಲಿಸಿಕೊಂಡು ಉತ್ತಮ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತದ ಸದಸ್ಯರಾದ ಪ್ರದೀಪ ನಾಯಕ ದೇವರಬಾವಿ ಹೇಳಿದರು.

ಅವರು ಇಲ್ಲಿನ ಭದ್ರಕಾಳಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್.ನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಕಾರ್ಯಕ್ರಮ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.ವಿದ್ಯಾಭ್ಯಾಸದ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಂಡು ಶಿಸ್ತು, ಪರಸ್ಪರ ಸಹಕಾರ ಮನೋಭಾವದೊಂದಿಗೆ ಸಾಮಾಜಕ್ಕೆ ಮಾದರಿ ವ್ಯಕ್ತಿಯಾಗಬೇಕು ಎಂದು ಕರೆ ನೀಡಿದರು.

RELATED ARTICLES  ಟಿ.ಎಸ್.ಎಸ್. ಶಿರಸಿಯಲ್ಲಿ "ಹಸಿರು ಮಾಸ” ಸಸ್ಯಗಳ ಪ್ರದರ್ಶನ ಮತ್ತು ಮಾರಾಟ ಮೇಳ.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೆನರಾ ಶಿಕ್ಷಣ ಪ್ರಸಾರಕ ಮಂಡಳದ ಗೌರವ ಕಾರ್ಯದರ್ಶಿ ಜಿ.ಎನ್.ನಾಯಕ ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸಕ್ಕೆ ಸಿಕ್ಕ ಈ ಸದಾವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಶಿಬಿರಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ಪ್ರಾಚಾರ್ಯ ಎಸ್.ಸಿ.ನಾಯಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಬಿರದ ಯೋಜನಾಧಿಕಾರಿ ರಾಮಮೂರ್ತಿ ನಾಯಕ ಸಾಪ್ತಾಹಿಕ ಶಿಬಿರದ ಸಂಕ್ಷಿಪ್ತ ವರದಿ ನೀಡಿದರು.

RELATED ARTICLES  ಇವೆಂಟ್ ಮ್ಯಾನೇಜ್‍ಮೆಂಟ್ ಕಾರ್ಯಗಾರ : ವಿದ್ಯಾರ್ಥಿಗಳಿಗೆ ಮಾರ್ಗದರ್ಶನ