ಕುಮಟಾ :ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬಾರಿ ಮಳೆಯಿಂದಾಗಿ ಶರಾವತಿ ನದಿ ಉಕ್ಕಿ ಹರಿಯುತಿದೆ.ಅದಷ್ಟೇ ಅಲ್ಲದೇ ಸಮುದ್ರದ ಅಬ್ಬರಕ್ಕೆ ಮರಡೇಶ್ವರ ಕಡಲ ತೀರ ಜಲಾವೃತವಾಗಿದ್ದು ಅಂಗಡಿ ಮುಂಗಟ್ಟುಗಳು ನೀರಿಗಾಹುತಿಯಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇನ್ನೂ ಮೂರು ದಿನ ಹೆಚ್ಚಿನ ಮಳೆಯಾಯಲಿದೆ.
ಹೀಗಾಗಿ ಈ ಭಾಗದ ನದಿಗಳು ಉಕ್ಕಿ ಹರಿಯುವ ಸಾಧ್ಯತೆ ಹೆಚ್ಚಿದ್ದು ಕದ್ರಾ ,ಲಿಂಗನಮಕ್ಕಿ ,ಗೇರುಸೊಪ್ಪ ಸೇರಿದಂತೆ ಜಿಲ್ಲೆಯ ಪ್ರಮುಖ ಜಲಾಶಯ ಭಾಗದ ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ಹೋಗುವುದು ಒಳಿತು ಎನ್ನಲಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದರಿಂದ ಅಲೆಗಳ ಅಬ್ಬರ ಹೆಚ್ಚಾಗುತಿದ್ದು ಮೀನುಗಾರಿಕೆಗೆ ಮೀನುಗಾರರು ತೆರಳದಂತೆ ಸೂಚನೆ ನೀಡಲಾಗಿದೆ.ಇನ್ನು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಕರಾವಳಿ ಮೀನುಗಾರಿಕೆ ಸ್ಥಗಿತ ಗೊಂಡಿದ್ದು ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು ಕಾರವಾರ ಹೊನ್ನಾವರ, ತದಡಿ ಬಂದರುಗಳು ಸೇರಿದಂತೆ ಕರ್ನಾಟಕ, ಗೋವಾ ಮೀನುಗಾರಿಕಾ ಬೋಟ್ ಗಳು ಲಂಗುರು ಹಾಕಿ ಆಶ್ರಯ ಪಡೆದಿದೆ.