ಕರಾವಳಿ ಭಾಗದಲ್ಲಿ ಮಳೆಯು ಎಡಬಿಡದೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಿಸಿದ್ದಾರೆ, ಭಾರೀ ಮಳೆಯಾಗುವ ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ವರೆಗೆ ಮಾತ್ರ) ಅ.25ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಆದೇಶ ಹೊರಡಿಸಿದ್ದಾರೆ.
ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಮುಂದಿನ 48 ಘಂಟೆಗಳಲ್ಲಿ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಭಾರಿ ಮಳೆ ಸುರಿಯಲಿರುವದರಿಂದ ಅ. 26 ರಂದು ರೆಡ್ ಅಲರ್ಟ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿಯೂ ಸಹ ವಾಯುಭಾರ ಕುಸಿತವಾಗಿರುವುದರಿಂದ ಹಿಂಗಾರು ಮಳೆ ಜೋರಾಗಲು ಕಾರಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಸೇರಿದಂತೆ ಕೆಲ ಕರಾವಳಿ ಭಾಗಕ್ಕೆ ಅ. 24 25 ರಂದು ಆರೇಂಜ್ ಅಲರ್ಟ, 26 ರಂದು ರೆಡ್ ಅಲರ್ಟ ಘೋಷಿಸಲಾಗಿದೆ.