ಶ್ರೀ ಶ್ರೀ ವಿಶ್ವಸಂತೋಷ ಭಾರತೀ ಸ್ವಾಮೀಜಿಗಳವರು, ಶ್ರೀ ಬಾರಕೂರು ಸಂಸ್ಥಾನಮಠ ಇವರು ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಆಗಮಿಸಿ ಅಭಿಷೇಕ , ಪೂಜೆ ನೆರವೇರಿಸಿದರು . ಪೂಜೆಯ ನಂತರ ಸ್ವಾಮೀಜಿಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು . ಶ್ರೀ ನಾಗರಾಜ ನಾಯಕ ತೊರ್ಕೆ ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಫಲ ಸಮರ್ಪಿಸಿದರು . ವೇ ಲಂಬೋಧರ ಚಿಟ್ಟೆ ಪೂಜಾ ಕೈಂಕರ್ಯ ನೆರವೇರಿಸಿದರು . ಉಪಾಧಿವಂತ ಮಂಡಲದ ಸದಸ್ಯರು ಉಪಸ್ಥಿತರಿದ್ದರು .