ಹೈದರಾಬಾದ್: ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳೂ ಎನ್’ಕೌಂಟರ್’ನಲ್ಲಿ ಹತರಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ಕೆಲ ದಿನಗಳ ಹಿಂದಷ್ಟೇ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದ ಆರೋಪಿಗಳು, ನಂತರ ಸೀಮೆಎಣ್ಣೆ ಹಾಕಿ ಸುಟ್ಟುಹಾಕಿದ್ದರು. ಪ್ರಕರಣದ ದೇಶದಾದ್ಯಂತ ಭಾರೀ ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾಗಿತ್ತು.
ಎಲ್ಲಾ ನಾಲ್ವರು ಆರೋಪಿಗಳಾದ ಶಿವು, ಆರಿಫ್ ಚೆನ್ನಕೇಶವುಲು, ನವೀನ್ ಎಂಬುವವರನ್ನು ಪೊಲೀಸರು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.
ತಮ್ಮ ಮಗಳನ್ನು ಹರಿದು ಮುಕ್ಕಿದ ಪಾಪಿಗಳಗೇ ದೇವರೇ ತಕ್ಕ ಶಾಸ್ತಿ ಮಾಡಿದ್ದಾನೆ ಎಂದು ಹೈದರಾಬಾದ್ ಪಶು ವೈದ್ಯೆ ಪ್ರಿಯಾಂಕಾರೆಡ್ಡಿ ಪೋಷಕರು ಹೇಳಿದ್ದಾರೆ.
ಪ್ರಿಯಾಂಕಾರೆಡ್ಡಿ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ಸುದ್ದಿ ಇದೀಗ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದು, ಪೊಲೀಸರ ಕಾರ್ಯಕ್ಕೆ ಎಲ್ಲಡೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ. ಇನ್ನು ಪೊಲೀಸರ ಕಾರ್ಯಕ್ಕೆ ಪ್ರಿಯಾಂಕಾ ರೆಡ್ಡಿ ಪೋಷಕರು ಕೂಡ ಹರ್ಷ ವ್ಯಕ್ತಪಡಿಸಿದ್ದು. ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾರೆಡ್ಡಿ ತಾಯಿ, ತಮ್ಮ ಮಗಳನ್ನು ಹರಿದು ಮುಕ್ಕಿದ ಪಾಪಿಗಳಗೇ ದೇವರೇ ತಕ್ಕ ಶಾಸ್ತಿ ಮಾಡಿದ್ದಾನೆ. ಆ ದೇವರೇ ಪಾಪಿಗಳಿಗೆ ಶಿಕ್ಷೆ ನೀಡುವ ಮೂಲಕ ನನ್ನ ಮಗಳಿಗೆ ನ್ಯಾಯ ಕೊಡಿಸಿದ್ದಾನೆ ಎಂದು ಹೇಳಿದ್ದಾರೆ.