ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ಮಂಗಳೂರಿನ 5 ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಲ್ಲದೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇದೀಗ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜು, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ರಜೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಘೋಷಣೆ ಮಾಡಿದ್ದಾರೆ.